HomeKarnatakaBREAKING : ಬಿಜೆಪಿ ಸರ್ಕಾರದ ಅವಧಿಯ 'ಕೋವಿಡ್' ಹಗರಣ : ತನಿಖೆಗೆ 'SIT' ರಚಿಸಲು ರಾಜ್ಯ...

BREAKING : ಬಿಜೆಪಿ ಸರ್ಕಾರದ ಅವಧಿಯ ‘ಕೋವಿಡ್’ ಹಗರಣ : ತನಿಖೆಗೆ ‘SIT’ ರಚಿಸಲು ರಾಜ್ಯ ಸರ್ಕಾರ ನಿರ್ಧಾರ.!

ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯ ಕೋವಿಡ್ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ(SIT)  ರಚಿಸಲು ಸಂಪುಟ ಸಭೆ ( Karntaka Cabinet Meeting) ನಿರ್ಧರಿಸಿದೆ.

ಇಂದು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಮಾಜಿ ಸಚಿವ ಸುಧಾಕರ್ ಗೆ ಸಂಕಷ್ಟ ಎದುರಾಗಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40% ಕಮಿಷನ್ ಆರೋಪ ಹಾಗೂ ಕೋವಿಡ್ ಹಗರಣವನ್ನು ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರವು ಎರಡು ಪ್ರತ್ಯೇಕ ಆದೇಶ ಹೊರಡಿಸಿತ್ತು. ಕೋವಿಡ್ ಸಂದರ್ಭದಲ್ಲಿ ಖರೀದಿ ಅಕ್ರಮ ಅಪಾದನೆ ಕುರಿತಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಇದೀಗ ಎಸ್ ಐ ಟಿ ರಚಿಸಲು ಸಂಪುಟ ಸಭೆ ನಿರ್ಧರಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular