HomeLatest NewsBREAKING:  ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಗೆ ಮಾತೃವಿಯೋಗ

BREAKING:  ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಗೆ ಮಾತೃವಿಯೋಗ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರ ತಾಯಿ ಸುಶೀಲಮ್ಮ ವಯೋಸಹಜ ಕಾಯಿಲೆಯಿಂದ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್, ನನ್ನನ್ನು ಹೊತ್ತು, ಹೆತ್ತು, ಸಾಕಿ, ತಿದ್ದಿ ಬೆಳೆಸಿದ ನನ್ನಮ್ಮ ಎಲ್ಲರ ಸುಶೀಲಮ್ಮ ಟೀಚರ್ ಇನ್ನಿಲ್ಲ. ಇಂದು ಬೆಳಗಿನ ಜಾವ ನನ್ನನ್ನು ಬಿಟ್ಟು ಹೊರಟುಬಿಟ್ಟರು ಎಂದು ತಿಳಿಸಿದ್ದಾರೆ.

ಶಿಕ್ಷಕಿಯಾಗಿದ್ದ ಸುಶೀಲಮ್ಮ ಅವರು ನಿವೃತ್ತಿಯ ನಂತರ ಬೆಂಗಳೂರಿನ ಲಕ್ಷ್ಮೀನಾರಾಯಣ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ 8 ಬಾರಿ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರ ನಿಧನಕ್ಕೆ ಬಿಜೆಪಿ ನಾಯಕರು, ಮುಖಂಡರು ಸಂತಾಪ ಸೂಚಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular