ಬೆಂಗಳೂರು: ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಬಿಜೆಪಿ ಶಾಸಕರ ಒಂದು ತಿಂಗಳ ಸಂಬಳ ನೀಡಲಾಗುವುದು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.
ಕಾಲ್ತುಳಿತದಲ್ಲಿ ಮೃತಪಟ್ಟ ಕಷ್ಟದಲ್ಲಿರುವ ಕುಟುಂಬದವರಿಗೆ ತಿಂಗಳ ಸಂಬಳ ತಲುಪಿಸುತ್ತೇವೆ. ಮೃತರ ಕುಟುಂಬದವರ ಮನೆಗಳಿಗೆ ಭೇಟಿ ನೀಡುತ್ತೇವೆ. ನಮ್ಮ ಶಾಸಕರು, ವಿಧಾನ ಪರಿಷತ್ ಸದಸ್ಯರು ಮೃತರ ಮನೆಗಳಿಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಲಿದ್ದಾರೆ. ಒಂದು ತಿಂಗಳ ಪ್ರವಾಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಕಾಲ್ತುಳಿತದಲ್ಲಿ 11 ಜನ ಸಾವನ್ನಪ್ಪಿದ್ದಾರೆ. ಇದು ಸರ್ಕಾರಿ ಪ್ರಾಯೋಜಿತ ಕೊಲೆಯಾಗಿದೆ. ನಾವು ಪೊಲೀಸರ ಜೊತೆಗೆ ಇದ್ದೇವೆ ಎಂದು ಅಶೋಕ್ ಹೇಳಿದ್ದಾರೆ.

 
			 
		 
		 
		 
		 Loading ...
 Loading ... 
		 
		 
		