ವಿಜಯಪುರ : ವಿಜಯಪುರ ಬಿಜೆಪಿ ಸಂಸದ ರಮೇಶ್ ಜಿಗಜಿಣಗಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಜಯಪುರದಿಂದ ಬಾಗಲಕೋಟೆ ಮಾರ್ಗವಾಗಿ ಕಾರಿನಲ್ಲಿ ಬರುವಾಗ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಬಾಗಲಕೋಟೆ ಕುಮಾರೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ, ಅವರಿಗೆ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.