ನವದೆಹಲಿ: ದೆಹಲಿಯಲ್ಲಿರುವ ಬಿಜೆಪಿ ರೆಬೆಲ್ಸ್ ಟೀಂ ಕುತೂಹಲಕಾರಿ ಹೆಜ್ಜೆ ಇಟ್ಟಿದೆ. ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಬಿಜೆಪಿ ರೆಬೆಲ್ಸ್ ಟೀಂ ಭೇಟಿಯಾಗಿದೆ.
ನವದೆಹಲಿಯಲ್ಲಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಿವಾಸದಲ್ಲಿ ಭೇಟಿಯಾದ ರಮೇಶ್ ಜಾರಕಿಹೊಳಿ, ಕುಮಾರ್ ಬಂಗಾರಪ್ಪ, ಶ್ರೀಮಂತ ಪಾಟೀಲ್ ಮತ್ತಿತರರು ಚರ್ಚೆ ನಡೆಸಿದ್ದಾರೆ. ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಕುಮಾರಸ್ವಾಮಿಯವರೊಂದಿಗೆ ಚರ್ಚೆ ನಡೆಸಲಾಗಿದೆ. ರಮೇಶ್ ಜಾರಕಿಹೊಳಿ –ಹೆಚ್.ಡಿ. ಕುಮಾರಸ್ವಾಮಿ ಅವರ ಭೇಟಿ ಭಾರೀ ಕುತೂಹಲ ಮೂಡಿಸಿದೆ.
