ಮೈಸೂರು : ಮೈಸೂರಿನಲ್ಲಿ ಚಾಮುಂಡೇಶ್ವರಿ ಚಲೋ ನಡೆಸಲು ಮುಂದಾಗಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಹೌದು, ಲೇಖಕಿ ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟಿಸುವುದನ್ನು ವಿರೋಧಿಸಿ ಬಿಜೆಪಿಗರು ಮೈಸೂರಿನಲ್ಲಿ ಚಾಮುಂಡೇಶ್ವರಿ ಚಲೋ ನಡೆಸಲು ಮುಂದಾಗಿದ್ದಾರೆ.
ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆಯಲ್ಲಿ ಕೆಲವು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗಿರಿಧರ್, ದಿನೇಶ್, ಕುಂಬ್ರಳ್ಳಿ ಸುಬ್ಬಣ್ಣ, ರೇಣುಕಾ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ.