HomeLatest NewsBREAKING: ತಡರಾತ್ರಿ ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ: ಸಿನಿಮೀಯ ಶೈಲಿಯಲ್ಲಿ ಕೃತ್ಯ

BREAKING: ತಡರಾತ್ರಿ ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ: ಸಿನಿಮೀಯ ಶೈಲಿಯಲ್ಲಿ ಕೃತ್ಯ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಯುವ ಮುಖಂಡನನ್ನು ಹತ್ಯೆ ಮಾಡಲಾಗಿದೆ.

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ(31) ಹತ್ಯೆಯಾದವರು. ಗಂಗಾವತಿಯ ಲೀಲಾವತಿ ಆಸ್ಪತ್ರೆಯ ಮುಂಭಾಗ ಮಧ್ಯರಾತ್ರಿ ಎರಡು ಗಂಟೆಗೆ ಕಾರ್ ನಲ್ಲಿ ಆಗಮಿಸಿದ್ದ ಆರೋಪಿಗಳು ವೆಂಕಟೇಶ್ ನನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ.

ಮಾರಕಾಸ್ತ್ರಗಳಿಂದ ಕೊಚ್ಚಿ ವೆಂಕಟೇಶ ಕುರುಬರ ಅವರನ್ನು ಹತ್ಯೆ ಮಾಡಲಾಗಿದೆ. ಹತ್ಯೆಯ ನಿಖರ ಕಾರಣ ಗೊತ್ತಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿನಿಮಾ ಶೈಲಿಯಲ್ಲಿ ಹತ್ಯೆ ನಡೆದಿದೆ. ಸ್ನೇಹಿತರೊಂದಿಗೆ ಊಟ ಮುಗಿಸಿದ ವೆಂಕಟೇಶ್ ದೇವಿ ಕ್ಯಾಂಪ್ ನಿಂದ ಗಂಗಾವತಿಗೆ ಹೋಗುತ್ತಿದ್ದ ವೇಳೆ ಬೈಕ್ ಫಾಲೋ ಮಾಡಿದ ದುಷ್ಕರ್ಮಿಗಳು ಕಾರ್ ನಿಂದ ವೆಂಕಟೇಶ್ ಇದ್ದ ಬೈಕ್ ಗೆ ಗುದ್ದಿಸಿದ್ದಾರೆ. ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಗಂಗಾವತಿ ಡಿವೈಎಸ್ಪಿ ಸಿದ್ಧನಗೌಡ ಪಾಟೀಲ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾವತಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular