HomeLatest NewsBREAKING: ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿ: ಗಾಯಗೊಂಡಿದ್ದ ಪ್ರಯಾಣಿಕ ಸಾವು

BREAKING: ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿ: ಗಾಯಗೊಂಡಿದ್ದ ಪ್ರಯಾಣಿಕ ಸಾವು

ಬೆಂಗಳೂರು: ಮೆಟ್ರೋ ಪಿಲ್ಲರ್ ಗೆ ಬಿಎಂಟಿಸಿ ಬಸ್ ಡಿಕ್ಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಓರ್ವ ಪ್ರಯಾಣಿಕ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಬಿಡದಿ ಮೂಲದ ಪ್ರಯಾಣಿಕ ಜಯರಾಮ್(57) ಮೃತಪಟ್ಟವರು ಎಂದು ಹೇಳಲಾಗಿದೆ. ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಜಯರಾಮ್ ಸಾವನ್ನಪ್ಪಿದ್ದಾರೆ.

ಜೂನ್ 6ರಂದು ರಾತ್ರಿ 8:30 ಕ್ಕೆ ಬಿಎಂಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಅಪಘಾತದಲ್ಲಿ ಚಾಲಕ, ನಿರ್ವಾಹಕ ಸೇರಿ 12 ಜನ ಗಾಯಗೊಂಡಿದ್ದರು. ಪೊಲೀಸರು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಂಗೇರಿ ಮೈಲಸಂದ್ರ ಸಮೀಪ ಅಪಘಾತ ನಡೆದಿತ್ತು. ಕೆಆರ್ ಮಾರುಕಟ್ಟೆಯಿಂದ ಬಿಡದಿಗೆ ತೆರಳುತ್ತಿದ್ದ ಬಿಎಂಟಿಸಿ ಬಸ್ ನ ಸ್ಟೇರಿಂಗ್ ಸಂಪರ್ಕ ಕಟ್ ಆಗಿ ನಿಯಂತ್ರಣ ಕಳೆದುಕೊಂಡು ಮೆಟ್ರೋಪಿಲ್ಲರ್ ಗೆ ಡಿಕ್ಕಿ ಹೊಡೆದಿತ್ತು. ಕೆಂಗೇರಿ  ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular