HomeKarnatakaBREAKING : ಕಾಲೇಜು ಆಡಳಿತ ಮಂಡಳಿ ಕಿರುಕುಳ ಆರೋಪ : ಬೆಂಗಳೂರಿನಲ್ಲಿ 'ವಿದ್ಯಾರ್ಥಿ' ಆತ್ಮಹತ್ಯೆ

BREAKING : ಕಾಲೇಜು ಆಡಳಿತ ಮಂಡಳಿ ಕಿರುಕುಳ ಆರೋಪ : ಬೆಂಗಳೂರಿನಲ್ಲಿ ‘ವಿದ್ಯಾರ್ಥಿ’ ಆತ್ಮಹತ್ಯೆ

ಬೆಂಗಳೂರು : ಮಾತ್ರೆ ಸೇವಿಸಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಗರದ ಎಎಂಸಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ನಿಖಿಲ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಎಎಂಸಿ ಕಾಲೇಜಿನಲ್ಲಿ ಹೋಟೆಲ್ ಮ್ಯಾನೇಜ್ ಮೆಂಟ್ ವ್ಯಾಸಂಗ ಮಾಡುತ್ತಿದ್ದ ನಿಖಿಲ್ ಗೆ ಕಳೆದ 1 ತಿಂಗಳಿನಿಂದ ಕಾಲೇಜು ಆಡಳಿತ ಮಂಡಳಿಯವರು ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿ ಜೊತೆ ಮಿಸ್ ಬಿಹೇವ್ ಮಾಡಿದ್ದಾನೆ ಎಂದು ಆರೋಪಿಸಿ ನಿಖಿಲ್ ಗೆ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ನನ್ನ ಮುಂದೆಯೇ ನನ್ನ ಮಗನ್ನು ಬೈದಿದ್ದರು. ನನ್ನ ಮಗನನ್ನು ಅವಮಾನ ಮಾಡಿದ್ದಾರೆ, ನನ್ನ ಮಗನ ಸಾವಿಗೆ ಕಾಲೇಜು ಪ್ರಿನ್ಸಿಪಾಲರು ಹಾಗೂ ಆಡಳಿತ ಮಂಡಳಿ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular