HomeLatest NewsBREAKING: ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ, ಫ್ಲೈಓವರ್ ಮೇಲಿಂದ ಬಿದ್ದ ಶಂಕೆ

BREAKING: ಬೆಂಗಳೂರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ, ಫ್ಲೈಓವರ್ ಮೇಲಿಂದ ಬಿದ್ದ ಶಂಕೆ

ಬೆಂಗಳೂರು: ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ. ಮಾಲ್ ಆಫ್ ಏಷಿಯಾ ಮುಂಭಾಗದ ರಸ್ತೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಕಂಡು ಬಂದಿದೆ.

ಕೆಐಎಎಲ್ ಏರ್ಪೋರ್ಟ್ ರಸ್ತೆಯ ಫ್ಲೈ ಓವರ್ ಕೆಳಭಾಗದ ರಸ್ತೆಯಲ್ಲಿ ಶವ ಕಂಡು ಬಂದಿದೆ. ಮಧ್ಯರಾತ್ರಿ 12:30 ಸುಮಾರಿಗೆ ಘಟನೆ ನಡೆದಿದೆ. ಅದೇ ಜಾಗದ ಫ್ಲೈಓವರ್ ಮೇಲೆ ಅಪರಿಚಿತ ಬೈಕ್ ನಿಂತಿದೆ. ಬೈಕ್ ನಿಲ್ಲಿಸದ ಬಳಿಕ ಅದೇ ಜಾಗದಿಂದ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೊಡಿಗೇಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular