HomeKarnatakaBREAKING: ಮರಕ್ಕೆ ಬೊಲೆರೋ ವಾಹನ ಡಿಕ್ಕಿ, ಅಪಘಾತದಲ್ಲಿ ಇಬ್ಬರು ಕಾರ್ಮಿಕರು ಸಾವು, 6 ಮಂದಿಗೆ ಗಾಯ

BREAKING: ಮರಕ್ಕೆ ಬೊಲೆರೋ ವಾಹನ ಡಿಕ್ಕಿ, ಅಪಘಾತದಲ್ಲಿ ಇಬ್ಬರು ಕಾರ್ಮಿಕರು ಸಾವು, 6 ಮಂದಿಗೆ ಗಾಯ

ಮರಕ್ಕೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಅಂದನೂರು ಸಮೀಪ ಅಪಘಾತ ಸಂಭವಿಸಿದೆ.

ಕಲ್ಲವ್ವ ನಾಗತಿಹಳ್ಳಿಯ ಅರುಣ್(32), ಹನುಮಂತ(32) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಡಕೆ ಲೋಡ್ ಇಳಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.

ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಿಂದ ವಾಪಸ್ ಬರುವಾಗ ನಿಯಂತ್ರಣ ತಪ್ಪಿದ ವಾಹನ ಮರಕ್ಕೆ ಡಿಕ್ಕಿಯಾಗಿದೆ. ಬೊಲೆರೋ ವಾಹನದಲ್ಲಿದ್ದ ಆರು ಕಾರ್ಮಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular