ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಪಣಸಮಾಕಲಹಳ್ಳಿಯಲ್ಲಿ ಬೊಲೆರೋ ವಾಹನ ಡಿಕ್ಕಿಯಾಗಿ ಹೆಡ್ ಕಾನ್ಸ್ ಟೆಬಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆನಂದ ಬಾಬು(45) ಮೃತಪಟ್ಟವರು ಎಂದು ಹೇಳಲಾಗಿದೆ. ಶ್ರೀನಿವಾಸಪುರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೆಬಲ್ ಆನಂದ ಬಾಬು ರಾತ್ರಿ ಗಸ್ತು ಡ್ಯೂಟಿಯಲ್ಲಿದ್ದರು. ಗಸ್ತು ತಿರುಗುತ್ತಿದ್ದ ವೇಳೆ ಬೊಲೆರೋ ವಾಹನ ಡಿಕ್ಕಿಯಾಗಿ ಘಟನೆ ನಡೆದಿದೆ. ಆನಂದ ಬಾಬು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಒಂದೂವರೆ ವರ್ಷದಿಂದ ಶ್ರೀನಿವಾಸಪುರದಲ್ಲಿ ಆನಂದ ಬಾಬು ಕಾರ್ಯನಿರ್ವಹಿಸುತ್ತಿದ್ದರು. ಮುಂಜಾನೆ 4 ಸಮಯದಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಕೋಲಾರ ಎಸ್ಪಿ ಕನ್ನಿಕಾ ಸಿಕ್ರಿಯಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

