ಚಿತ್ರದುರ್ಗ: ಬೊಲೆರೋ ಗೂಡ್ಸ್ ವಾಹನ ಸೇತುವೆಗೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಲೋಕದೊಳಲು ಗ್ರಾಮದ ಬಳಿ ನಡೆದಿದೆ.
ಅಪಘಾತದಲ್ಲಿ ಬೊಲೆರೋ ವಾಹನದಲ್ಲಿದ್ದ ಧರಣೇಶ್(58), ರಂಗಸ್ವಾಮಿ(45) ಮೃತಪಟ್ಟಿದ್ದಾರೆ. ಮೃತರು ಹೊಳಲ್ಕೆರೆ ತಾಲೂಕಿನ ಉಪ್ಪಾರಹಟ್ಟಿ ಗ್ರಾಮದ ನಿವಾಸಿಗಳಾಗಿದ್ದಾರೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಗಾಯಾಳುಗಳನ್ನು ಹೊಳಲ್ಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪಿಎಸ್ಐ ಸಚಿನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಳಲ್ಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.