ಬೆಂಗಳೂರು : ಬೆಂಗಳೂರಿನ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ (Bomb threat) ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವರ್ತೂರು ಸಮೀಪದ ಕ್ರಿಸಲಿಸ್ ಹೈ ಶಾಲೆಗೆ ಕಿಡಿಗೇಡಿಗಳು ಬೆದರಿಕೆ ಸಂದೇಶ ಕಳುಹಿಸಿದ್ದು, ಮುಂಜಾಗೃತಾ ಕ್ರಮವಾಗಿ ಮಕ್ಕಳನ್ನು ಶಾಲಾ ಆಡಳಿತ ಮಂಡಳಿ ಮನೆಗೆ ಕಳುಹಿಸಿದೆ.
ಘಟನೆ ನಡೆದ ಸ್ಥಳಕ್ಕೆ ವರ್ತೂರು ಠಾಣೆ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

