BREAKING : ಕೇರಳದ ಕ್ಯಾಲಿಕಟ್ ಏರ್ ಪೋರ್ಟ್ ನಲ್ಲಿ ಏರ್ ಅರೇಬಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ |Bomb Threat

ಕ್ಯಾಲಿಕಟ್ : ಶನಿವಾರ ಬೆಳಿಗ್ಗೆ ಕ್ಯಾಲಿಕಟ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಶಾರ್ಜಾಗೆ ಹೊರಡಬೇಕಿದ್ದ ಏರ್ ಅರೇಬಿಯಾ ವಿಮಾನಕ್ಕೆ ಹುಸಿ ಬಾಂಬ್ ಬೆದರಿಕೆ ಬಂದಿದೆ.

ಸುದ್ದಿ ತಿಳಿದ ಕೂಡಲೇ ದೌಡಾಯಿಸಿದ ಪೊಲೀಸರು ಹಾಗೂ ಬಾಂಬ್ ಸ್ಕ್ವಾಡ್ ತಪಾಸಣೆ ನಡೆಸಿದೆ . ನಂತರ ಇದು ಹುಸಿ ಕರೆ ಎಂಬುದು ಸ್ಪಷ್ಟವಾಯಿತು.

ವಿಮಾನದ ಆಸನದ ಮೇಲೆ “ಬಾಂಬ್” ಎಂದು ಬರೆದ ಟಿಪ್ಪಣಿಯನ್ನು ಕಂಡ ವಿಮಾನ ನಿಲ್ದಾಣದ ಅಧಿಕಾರಿಗಳು ಶಾಕ್ ಆಗಿದ್ದರು. . ಶಾರ್ಜಾದಿಂದ ಕ್ಯಾಲಿಕಟ್ ಗೆ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರೊಬ್ಬರು ಈ ಟಿಪ್ಪಣಿಯನ್ನು ಬಿಟ್ಟು ಹೋಗಿದ್ದಾರೆ ಎಂದು ವಿಮಾನ ನಿಲ್ದಾಣದ ಹಿರಿಯ ಅಧಿಕಾರಿಯೊಬ್ಬರು ವರದಿ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read