HomeLatest NewsBREAKING: ಬೆಟ್ಟದಲ್ಲಿ ಜೊತೆಗಿದ್ದ ಹುಡುಗ –ಹುಡುಗಿ ವಿಡಿಯೋ ಮಾಡಿ ದೌರ್ಜನ್ಯ: ಇಬ್ಬರು ವಶಕ್ಕೆ

BREAKING: ಬೆಟ್ಟದಲ್ಲಿ ಜೊತೆಗಿದ್ದ ಹುಡುಗ –ಹುಡುಗಿ ವಿಡಿಯೋ ಮಾಡಿ ದೌರ್ಜನ್ಯ: ಇಬ್ಬರು ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ವೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೌರ್ಜನ್ಯ ನಡೆಸಿದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಪುರುಷೋತ್ತಮ್(43), ರಾಮಚಂದ್ರ(38) ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ. ಸಂತ್ರಸ್ತ ಬಾಲಕನ ತಂದೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಮಾಹಿತಿ ನೀಡಿ, ಇಬ್ಬರು ಅಪ್ರಾಪ್ತರು ಒಂದೇ ಧರ್ಮಕ್ಕೆ ಸೇರಿದವರಾಗಿದ್ದು, ಘಟನೆ ಸಂಬಂಧ ಬಾಲಕನ ತಂದೆ ಠಾಣೆಗೆ ದೂರು ನೀಡಿದ್ದಾರೆ. ನನ್ನ ಮಗ ಮತ್ತು ಬಾಲಕಿಗೆ ಇಬ್ಬರು ಕಿರುಕುಳ ನೀಡಿದ್ದಾರೆ. ಬೇರೆ ಧರ್ಮದವರೆಂದು ಅನುಮಾನದಿಂದ ತೊಂದರೆ ನೀಡಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಡಿಯೋ ಮಾಡಿ ಹರಿಬಿಟ್ಟಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇಬ್ಬರು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular