ಬೆಂಗಳೂರು: ಕಗ್ಗಲೀಪುರ ರಸ್ತೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಕಗ್ಗಲೀಪುರ ರಸ್ತೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ 13 ವರ್ಷದ ನಿಶ್ಚಿತ್ ಶವ ಪತ್ತೆಯಾಗಿದೆ.
ದುಷ್ಕರ್ಮಿಗಳು ನಿಶ್ಚಿತ್ ನನ್ನು ಕೊಂದು ಶವ ಸುಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಎಸ್ಪಿ ವೆಂಕಟೇಶ್ ಪ್ರಸನ್ನ, ಡಿವೈಎಸ್ಪಿ ಮೋಹನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.