HomeKarnatakaBREAKING : 'ಬಂಡೀಪುರ' ಅರಣ್ಯ ಪ್ರದೇಶದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್

BREAKING : ‘ಬಂಡೀಪುರ’ ಅರಣ್ಯ ಪ್ರದೇಶದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್

ಚಾಮರಾಜನಗರ : ಬಂಡೀಪುರದಲ್ಲಿ ಹೊಸ ವರ್ಷದ ಸಂಭ್ರಮಾಚರಣೆಗೆ ಅರಣ್ಯ ಇಲಾಖೆ ಬ್ರೇಕ್ ಹಾಕಿದ್ದು, ಡಿಸೆಂಬರ್ 31 ಮತ್ತು ಜನವರಿ 1ರಂದು ಪ್ರವಾಸಿಗರಿಗೆ ವಸತಿ ಗೃಹಗಳು ನೀಡದಿರಲು ಬಂಡೀಪುರ ಅರಣ್ಯ ಇಲಾಖೆ ನಿರ್ಧರಿಸಿದೆ.

ಪರಿಸರ ಸೂಕ್ಷ್ಮ ವಲಯದಲ್ಲಿರುವ ಹೋಂ ಸ್ಟೇ, ರೆಸಾರ್ಟ್ಗಳಲ್ಲಿ ಡಿಜೆ, ಪಟಾಕಿ ಸಿಡಿಸುವುದು, ಲೈಟಿಂಗ್ ಸೇರಿದಂತೆ ಕೆಲ ನಿರ್ಬಂಧ ಹೇರಲಾಗಿದೆ.ಡಿಸೆಂಬರ್ 31 ಮತ್ತು ಜನವರಿ 1ರಂದು ಪ್ರವಾಸಿಗರಿಗೆ ವಸತಿ ಗೃಹಗಳು ನೀಡದಿರಲು ಬಂಡೀಪುರ ಅರಣ್ಯ ಇಲಾಖೆ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

ಡಿ.31ರಂದು ಹಾಗೂ ಜನವರಿ 1ರಂದು ಎಂದಿನಂತೆ ಸಫಾರಿ ನಡೆಯಲಿದೆ. ಆದ್ರೇ ರಾತ್ರಿ ಬಂಡೀಪುರದಲ್ಲಿನ ವಸತಿಗೃಹ, ಕಾಟೇಜ್ ಗಳಲ್ಲಿ ಪ್ರವಾಸಿಗರ ವಾಸ್ತವ್ಯಕ್ಕೆ ಅವಕಾಶವಿಲ್ಲ ಎಂದು  ಬಂಡೀಪುರ ವಲಯ ಅರಣ್ಯಾಧಿಕಾರಿ ರಮೇಶ್ ಕುಮಾರ್ ಹೇಳಿದ್ದಾರೆ. ಬಂಡೀಪುರ ಅರಣ್ಯ ವ್ಯಾಪ್ತಿಯ ಖಾಸಗಿ ರೆಸಾರ್ಟ್ ಗಳಲ್ಲಿಯೂ ಮೋಜು, ಮಸ್ತಿಗೆ ಬ್ರೇಕ್ ಹಾಕಲಾಗಿದೆ. ಖಾಸಗಿ ರೆಸಾರ್ಟ್ ಗಳಲ್ಲಿ ಮೋಜು ಮಸ್ತಿ ಮಾಡುವಂತಿಲ್ಲ. ಕಲರ್ ಲೈಟಿಂಗ್ ಅಳವಡಿಸದಂತೆ ನಿರ್ಬಂಧ ವಿಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular