HomeKarnatakaBREAKING : ಭೂಗತ ಪಾತಕಿ ರವಿ ಪೂಜಾರಿಯ ಸಹಚರ ಮೊಹಮ್ಮದ್ ಹನೀಫ್ ಅರೆಸ್ಟ್

BREAKING : ಭೂಗತ ಪಾತಕಿ ರವಿ ಪೂಜಾರಿಯ ಸಹಚರ ಮೊಹಮ್ಮದ್ ಹನೀಫ್ ಅರೆಸ್ಟ್

ಮಂಗಳೂರು  : ಭೂಗತಪಾತಕಿ ರವಿ ಪೂಜಾರಿ ಸಹಚರ ಮೊಹಮ್ಮದ್ ಹನೀಫ್ ಎಂಬಾತನನ್ನು ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸಿದ್ದಾರೆ.

 ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾ ಬಂಧಿತ ಆರೋಪಿಯಾಗಿದ್ದು, ಈತನು  ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಬಂಧನ ವಾರಂಟ್ ಎದುರಿಸುತ್ತಿದ್ದನು. ಈತನ ವಿರುದ್ಧ  ಮಂಗಳೂರು ಉತ್ತರ, ಕೊಣಾಜೆ, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ. ಸದ್ಯ ಈತನನ್ನು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular