BREAKING : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ : ಮೃತರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರ ಘೋಷಣೆ.!

ಬೆಂಗಳೂರು : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ದುರಂತದಲ್ಲಿ ಐವರು ಮೃತಪಟ್ಟಿದ್ದು, ಮೃತರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಿದೆ.

ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿದು ಮೃತಪಟ್ಟ ಎಲ್ಲ ಕಾರ್ಮಿಕರಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲು ನಿರ್ಧರಿಸಲಾಗಿದೆ (ಕಾರ್ಮಿಕ ಇಲಾಖೆಯಿಂದ 2 ಲಕ್ಷ ರೂ. ಹಾಗೂ ಬಿಬಿಎಂಪಿಯಿಂದ 3ಲಕ್ಷ ರೂ.) ಘಟನಾ ಸ್ಥಳಕ್ಕೆ ನಿನ್ನೆ ರಾತ್ರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಕಟ್ಟಡ ಮಾಲೀಕರ ತಪ್ಪಿರುವುದು ಮೇಲ್ನೋಟದಲ್ಲೇ ಗೊತ್ತಾಗಿದೆ.  ಈ ಘಟನೆ ನಮಗೊಂದು ಪಾಠವಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ರೀತಿ ಅನುಮತಿ ಇಲ್ಲದೆ ಅಕ್ರಮವಾಗಿ ನಿರ್ಮಾಣವಾಗುವ ಕಟ್ಟಡಗಳ ಮೇಲೆ ಕಟ್ಟುನಿಟ್ಟಾಗಿ ನಿಗಾವಹಿಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

https://twitter.com/DKShivakumar/status/1849151223179710618?ref_src=twsrc%5Egoogle%7Ctwcamp%5Eserp%7Ctwgr%5Etweet

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read