BREAKING : ಬೆಂಗಳೂರಿನಲ್ಲಿ ಕಟ್ಟಡ ಕುಸಿತ ಪ್ರಕರಣ : ಮೃತರ ಸಂಖ್ಯೆ 5 ಕ್ಕೇರಿಕೆ, ಮುಂದುವರೆದ ರಕ್ಷಣಾ ಕಾರ್ಯಾಚರಣೆ.!

ಬೆಂಗಳೂರು : ಬೆಂಗಳೂರು ಕಟ್ಟಡ ಕುಸಿತ ದುರಂತದಲ್ಲಿ ಐವರು ಸಾವನ್ನಪ್ಪಿದ್ದು, 21 ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದೆ.

ಹೆಣ್ಣೂರು ಸಮೀಪದ ಬಾಬುಸಾಬ್ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದ್ದು, ಮೃತರ ಸಂಖ್ಯೆ 5 ಕ್ಕೇರಿಯಾಗಿದೆ. ರಕ್ಷಣೆ ಮಾಡಿದಂತಹ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದಾನೆ.  ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದ ಐವರು ಕಾರ್ಮಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಸದ್ಯ, 21 ಕಾರ್ಮಿಕರ ರಕ್ಷಣೆಗೆ ಕಾರ್ಯಾಚರಣೆ ಎನ್ ಡಿ ಆರ್ ಎಫ್ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸತತವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಪಿಲ್ಲರ್ ಹಾಗೂ ಕಟ್ಟಡದ ಅವಶೇಷಗಳನ್ನು ಗ್ಯಾಸ್ ಕಟರ್ ಮೂಲಕ ಒಡೆದು ಕಾರ್ಮಿಕರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿದೆ.ಅವೈಜ್ಞಾನಿಕವಾಗಿ ಕಟ್ಟಡ ನಿರ್ಮಿಸಿದ ಹಿನ್ನೆಲೆ ಕಟ್ಟಡ ಮಾಲೀಕ ಸೇರಿ ಹಲವರ ವಿರುದ್ಧ ಹೆಣ್ಣೂರು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ನಾಲ್ಕು ಅಂತಸ್ತಿನ ಕಟ್ಟಡಕ್ಕೆ ಅನುಮತಿ ಪಡೆದು 7 ಅಂತಸ್ತಿನ ಕಟ್ಟಡ ನಿರ್ಮಿಸಲಾಗುತ್ತಿತ್ತು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read