ಬೆಂಗಳೂರು: ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಬಗ್ಗೆ ಇನ್ ಸ್ಟಾಗ್ರಾಂ ನಲ್ಲಿ ಬಿಲ್ಡಪ್ ವಿಡಿಯೋ ಹಾಕುತ್ತಿದ್ದ ಹಿನ್ನೆಲೆಯಲ್ಲಿ ಇನ್ ಸ್ಟಾಗ್ರಾಂ ಖಾತೆ ತೆರೆದವರ ವಿರುದ್ಧ ಕೇಸ್ ದಾಖಲಿಸಲಾಗಿದೆ.
ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬಿಲ್ಡಪ್ ಫೋಟೋ, ವಿಡಿಯೋ ಹಾಕುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ನಾಗನ ಬಿಲ್ಡಪ್ ಫೋಟೋ, ವಿಡಿಯೋ ಹಾಕುತ್ತಿದ್ದವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಡಿಯೋಗಳಿಂದ ಕಾನೂನು ವ್ಯವಸ್ಥೆಗೆ ಭಂಗ ತರುವ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ, ಯುವಕರನ್ನು ಪ್ರಚೋದಿಸುವ ಅಂಶಗಳು ಇರುವ ಹಿನ್ನೆಲೆಯಲ್ಲಿ ಕೇಸು ದಾಖಲಿಸಲಾಗಿದೆ. 7 ಇನ್ ಸ್ಟಾಗ್ರಾಂ ಖಾತೆ ತೆರೆದವರ ವಿರುದ್ಧ ಕೇಸು ದಾಖಲಿಸಿದ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.