
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಉಗಣೆಕಟ್ಟೆ ಬಳಿ ವಿದ್ಯುತ್ ಕಂಬಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಬಸ್ ಹೊಸದುರ್ಗಕ್ಕೆ ತೆರಳುತ್ತಿತ್ತು ಎಂದು ಹೇಳಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

