ಶಿವಮೊಗ್ಗ: ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಾಯಿ, ಮಗು ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪ ನಡೆದಿದೆ,
ಕುಂಸಿ ಸಮೀಪ ರಸ್ತೆ ಅಪಘಾತ ಸಂಭವಿಸಿದ್ದು, ತಾಯಿ ಅಸ್ಮಾ ಬಾನು(30), ಮಹಮ್ಮದ್ ಕಬೀರ್(3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪತಿ ಕಲಂದರ್ ಪಾಶ ಹಾಗೂ ಮತ್ತೊಂದು ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತರೀಕೆರೆಯ ಬುಕ್ಕಾಂಬೂದಿಯಿಂದ ಸಾಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಆನಂದಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದ್ದ ತಾಯಿ, ಮಗು ಸಾವನ್ನಪ್ಪಿದ್ದಾರೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.