HomeLatest NewsBREAKING: ಹಿಂಬದಿಯಿಂದ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ತಾಯಿ, ಮಗು ಸಾವು

BREAKING: ಹಿಂಬದಿಯಿಂದ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ತಾಯಿ, ಮಗು ಸಾವು

ಶಿವಮೊಗ್ಗ: ಬಸ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ತಾಯಿ, ಮಗು ಸಾವನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪ ನಡೆದಿದೆ,

ಕುಂಸಿ ಸಮೀಪ ರಸ್ತೆ ಅಪಘಾತ ಸಂಭವಿಸಿದ್ದು, ತಾಯಿ ಅಸ್ಮಾ ಬಾನು(30), ಮಹಮ್ಮದ್ ಕಬೀರ್(3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪತಿ ಕಲಂದರ್ ಪಾಶ ಹಾಗೂ ಮತ್ತೊಂದು ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತರೀಕೆರೆಯ ಬುಕ್ಕಾಂಬೂದಿಯಿಂದ ಸಾಗರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆನಂದಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದ್ದ ತಾಯಿ, ಮಗು ಸಾವನ್ನಪ್ಪಿದ್ದಾರೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular