ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಬಸ್ ಚಾಲಕ ಮಹಮ್ಮದ್ ರಫೀಕ್(42) ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ
ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಬೆಂಕಿಗಾಹುತಿಯಾಗಿತ್ತು. ಅಪಘಾತದಲ್ಲಿ ಚಾಲಕ ಮಹಮ್ಮದ್ ರಫೀಕ್ ಗಾಯಗೊಂಡಿದ್ದರು. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಹಾವೇರಿ ಜಿಲ್ಲೆ ಶಿಗ್ಗಾಂವಿ ನಿವಾಸಿಯಾಗಿದ್ದ ರಫೀಕ್ ಅವರನ್ನು ನಿನ್ನೆ ಮಧ್ಯಾಹ್ನ ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದು, ನಿನ್ನೆ ರಾತ್ರಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿದ್ದರು. ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ರಫೀಕ್ ಮೃತಪಟ್ಟಿದ್ದಾರೆ. ಇದರೊಂದಿಗೆ ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

