ಮೈಸೂರು: ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ನಂಜನಗೂಡಿನ ಚಾಮುಂಡಿ ಟೌನ್ ಶಿಪ್ ಸಮೀಪ ಅಪಘಾತ ಸಂಭವಿಸಿದೆ.
ಬೈಕ್ ಸವಾರರಾದ ಶಿವಮೂರ್ತಿ(52), ಸಿದ್ದಾರ್ಥ್(15) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಚೆನ್ನಮ್ಮ ಎಂಬುವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಚಾಮರಾಜನಗರ ಜಿಲ್ಲೆ ಉದ್ದನೂರಿನ ನಿವಾಸಿಗಳಾಗಿದ್ದಾರೆ.
ಮೈಸೂರು ಜಿಲ್ಲೆ ನಂಜನಗೂಡಿನ ಚಾಮುಂಡಿ ಟೌನ್ ಶಿಪ್ ಸಮೀಪ ಬೈಕ್ ಗೆ ಹಿಂಬದಿಯಿಂದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನಂಜನಗೂಡು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
