BREAKING : ಉದ್ಯಮಿ ‘ರತನ್ ಟಾಟಾ’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು |Ratan Tata

ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಟಾಟಾ ಸನ್ಸ್ ಮಾಜಿ ಅಧ್ಯಕ್ಷ ರತನ್ ನವಲ್ ಟಾಟಾ (86) ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಿಸಲಾಗಿದೆ. ರಕ್ತದೊತ್ತಡ ಕಡಿಮೆಯಾದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ರತನ್ ಟಾಟಾ ಅವರನ್ನು ಮುಂಜಾನೆ 12.30 ರಿಂದ 1.00 ರ ನಡುವೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿದೆ ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಮೂಲಗಳು ಖಚಿತಪಡಿಸಿವೆ. ಖ್ಯಾತ ಹೃದ್ರೋಗ ತಜ್ಞ ಡಾ.ಶಾರುಖ್ ಆಸ್ಪಿ ಗೋಲ್ವಾಲಾ ನೇತೃತ್ವದ ತಜ್ಞರ ತಂಡವು ಅವರ ಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read