HomeKarnatakaBREAKING : ವಿಧಾನಪರಿಷತ್ ಸದಸ್ಯ (MLC) ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ರಾಜೀನಾಮೆ ಸಲ್ಲಿಕೆ |C.P...

BREAKING : ವಿಧಾನಪರಿಷತ್ ಸದಸ್ಯ (MLC) ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ರಾಜೀನಾಮೆ ಸಲ್ಲಿಕೆ |C.P Yogeshwar

ಬೆಂಗಳೂರು : ಎಮ್ ಎಲ್ ಸಿ ಸ್ಥಾನಕ್ಕೆ ಸಿ ಪಿ ಯೋಗೇಶ್ವರ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ಸ್ಥಾನಕ್ಕೆ ಸಿ ಪಿ ಯೋಗೇಶ್ವರ್ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಹುಬ್ಬಳ್ಳಿಯಲ್ಲಿರುವ ಹೊರಟ್ಟಿ ಮನೆಗೆ ತೆರಳಿದ ಯೋಗೇಶ್ವರ್ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಚನ್ನಪಟ್ಟಣದಲ್ಲಿ ನಾನು ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣದಲ್ಲಿ ನಾನು ಎನ್ ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು ಎಂಬ ಆಸೆಯಿದೆ. ಅವಕಾಶ ಕೊಟ್ಟರೆ ಎನ್ ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ. ಆದರೆ ಬಿಜೆಪಿ ನಾಯಕರು ನನಗೆ ಬೆಂಬಲ ನೀಡುತ್ತಿಲ್ಲ. ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕೇಳಿಬಂದಿದೆ ಎಂದಿದ್ದಾರೆ.

ನಿಖಿಲ್ ಅವರನ್ನು ನಿಲ್ಲಿಸಬೇಕು ಎಂದು ಕುಮಾರಸ್ವಾಮಿ ಬಹಳ ಯತ್ನ ನಡೆಸುತ್ತಿದ್ದಾರೆ, ಅವರ ಮನಸ್ಸಿನಲ್ಲಿ ಹಾಗಿದ್ದಮೇಲೆ ನಾನೇನು ಮಾಡಲು ಸಾಧ್ಯ? ಒಂದು ವೇಳೆ ಟಿಕೆಟ್ ಸಿಗದಿದ್ದರೆ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಸದ್ಯ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಿದ್ದೇನೆ ಆ ಬಳಿಕ ನನ್ನ ನಿಲುವಿನ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular