ಬೆಂಗಳೂರು: ಶೀಘ್ರದಲ್ಲಿಯೇ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುವುದು. ಕರಾವಳಿ ಮತ್ತು ಮಲೆನಾಡು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರತ್ಯೇಕ ನೀತಿ ರೂಪಿಸಲಾಗುವುದು.
ಪ್ರತ್ಯೇಕ ನೀತಿ ರೂಪಿಸುವ ಬಗ್ಗೆ ಮಂಗಳೂರಿನಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ಚರ್ಚಿಸಿ ಒಪ್ಪಿಗೆ ನೀಡುವ ಸಾಧ್ಯತೆ ಇದೆ.
ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರು, ಕರಾವಳಿಯ ಹಲವಾರು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ.
ಕರ್ನಾಟಕವನ್ನು ಜಾಗತಿಕ ಮಟ್ಟದ ಪ್ರಮುಖ ಕರಾವಳಿ ಪ್ರವಾಸಿ ತಾಣವಾಗಿ ರೂಪಿಸುವ ಉದ್ದೇಶದೊಂದಿಗೆ, ವಿಶ್ವದರ್ಜೆಯ ಸುಸ್ಥಿರ ಪ್ರವಾಸೋದ್ಯಮ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುವುದು ಹಾಗೂ ಕರಾವಳಿ ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಹಾಗೂ ನೈಸರ್ಗಿಕ ಸೌಂದರ್ಯವನ್ನು ಜಗತ್ತಿಗೆ ಪರಿಚಯಿಸುವ ಮೂಲಕ ಪ್ರವಾಸೋದ್ಯಮವನ್ನು ಮತ್ತಷ್ಟು ಸಮೃದ್ಧಗೊಳಿಸುವುದು ನಮ್ಮ ಮುಖ್ಯ ಗುರಿಯಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

