HomeKarnatakaBREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ; ಸುಗ್ರೀವಾಜ್ಞೆ ಜಾರಿಗೆ ತರಲು ಸಚಿವ ಸಂಪುಟ...

BREAKING : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ; ಸುಗ್ರೀವಾಜ್ಞೆ ಜಾರಿಗೆ ತರಲು ಸಚಿವ ಸಂಪುಟ ಸಭೆ ಒಪ್ಪಿಗೆ.!

ಬೆಂಗಳೂರು : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿಗೆ ತರಲು ಸಚಿವ ಸಂಪುಟ ಸಭೆ ಇಂದು ಒಪ್ಪಿಗೆ ನೀಡಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್’ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿಗೆ ತರಲು ಸಚಿವ ಸಂಪುಟ ಸಭೆ ಇಂದು ಒಪ್ಪಿಗೆ ನೀಡಿದೆ.ಸುಗ್ರೀವಾಜ್ಞೆಗೆ ರಾಜ್ಯಪಾಲರ ಬಳಿ ಅಂಕಿತ ಪಡೆಯಲು ನಿರ್ಧರಿಸಲಾಗಿದೆ.

ಮೈಕ್ರೋ ಫೈನಾನ್ಸ್ ಗಳ ವಿರುದ್ಧದ ಸುಗ್ರೀವಾಜ್ಞೆ ಸಿದ್ಧವಾಗಿದ್ದು, ಇಂದು ಸಂಪುಟದ ಮುಂದೆ ಕರಡು ಮಂಡಿಸಲಾಗಿದೆ. ಸಂಪುಟ ಒಪ್ಪಿಗೆ ಬಳಿಕ ರಾಜ್ಯಪಾಲರಿಗೆ ರವಾನೆ ಮಾಡಲಾಗುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಲ ವಸೂಲಾತಿಯ ಸಂದರ್ಭದಲ್ಲಿ ಸಾಲಗಾರರಿಗೆ ಕಿರಕುಳ, ಅಮಾನವೀಯ ವರ್ತನೆ ತೋರುತ್ತಿರುವ ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕಲು ಸುಗ್ರೀವಾಜ್ಞೆ ಜಾರಿ ಬಗ್ಗೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.ನಿನ್ನೆ ವಿಧಾನಸೌಧದಲ್ಲಿ ಮಸೂದೆ ಅಂತಿಮಗೊಳಿಸುವ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರೊಂದಿಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆಗೆ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಸಭೆ ನಡೆಸಿ ಚರ್ಚೆ ನಡೆಸಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular