HomeLatest NewsBREAKING : ಏ.15 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ : 5 ಲಕ್ಷ...

BREAKING : ಏ.15 ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರಕ್ಕೆ ಕರೆ : 5 ಲಕ್ಷ ಲಾರಿಗಳ ಸಂಚಾರ ಬಂದ್ |Lorry Strike

ಬೆಂಗಳೂರು : ಏ.14 ರ ಮಧ್ಯರಾತ್ರಿಯಿಂದ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದ್ದು, 5 ಲಕ್ಷ ಲಾರಿಗಳ ಸಂಚಾರ ಬಂದ್ ಆಗಲಿದೆ.

ಸಭೆ ನಡೆಸಿದ ಲಾರಿ ಮಾಲೀಕರ ಸಂಘ 14 ರ ಮಧ್ಯರಾತ್ರಿಯಿಂದ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ಕರೆ ನೀಡಿದೆ. ಅಕ್ಕಿ, ಕಲ್ಲು, ಜಲ್ಲಿ ಸಾಗಿಸುವ ಲಾರಿಗಳ ಸಂಚಾರ ಬಂದ್ ಆಗಲಿದೆ.

ಲಾರಿ ಮುಷ್ಕರಕ್ಕೆ ಏರ್ ಪೋರ್ಟ್ ಟ್ಯಾಕ್ಸಿಗಳು, ಪೆಟ್ರೋಲ್ ಬಂಕ್ ಗಳು ಬೆಂಬಲ ನೀಡಿದೆ ಎಂದು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ. ಸರ್ಕಾರ ಡೀಸೆಲ್ ಬೆಲೆ ಏರಿಸಿದೆ. ರಾಜ್ಯ ಹೆದ್ದಾರಿಯಲ್ಲೂ ಟೋಲ್ ಸಂಗ್ರಹ ಶುರು ಮಾಡಿದ್ದಾರೆ. ನಾವು ಮುಷ್ಕರಕ್ಕೆ ಕರೆ ನೀಡಲು ಸಜ್ಜಾಗಿದ್ದರೂ ನಮ್ಮನ್ನು ಕರೆದು ಮಾತನಾಡಿಸುವ ಕೆಲಸ ಸರ್ಕಾರ ಮಾಡಿಲ್ಲ. ಡೀಸೆಲ್ ಬೆಲೆ ಇಳಿಸುವ ತನಕ ನಮ್ಮ ಪ್ರತಿಭಟನೆ ನಿಲ್ಲಲ್ಲ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular