ಮಂಡ್ಯ: ಮಂಡ್ಯ ಜಿಲ್ಲೆಯ ನೆಲಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುರೇಶ್ ಗೌಡ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ.
ಮಂಡ್ಯದ ಬಂತೆಕೊಪ್ಪಲು ಸಮೀಪ ನಿನ್ನೆ ರಾತ್ರಿ ನಡೆದಿದೆ. ಅದೃಷ್ಟವಶಾತ್ ಸುರೇಶ್ ಗೌಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಕ್ಷದ ಕಾರ್ಯಕರ್ತರೊಬ್ಬರ ಮದುವೆಗೆ ತೆರಳುತ್ತಿದ್ದ ವೇಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ಕಾರ್ ಭಾಗಶಃ ಜಖಂಗೊಂಡಿದೆ.
ಅಪಘಾತದಲ್ಲಿ ಸುರೇಶ್ ಗೌಡ ಅವರ ಕೈಗೆ ಪೆಟ್ಟಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣವೇ ಗನ್ ಮ್ಯಾನ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುರೇಶ್ ಗೌಡ ಹಾಗೂ ಚಾಲಕನನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

