ಚಿತ್ರದುರ್ಗ: ರಾಷ್ಟ್ರೀಯ ಹೆದ್ದಾರಿ 150 ಎ ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರು -ಲಾರಿ ನಡುವೆ ಡಿಕ್ಕಿಯಾಗಿ ಹೆಗ್ಗೆರೆ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಕಾರಿನಲ್ಲಿದ್ದ ಮೂವರು ಆರ್.ಎಸ್.ಐ.ಗಳು ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪ ಅಪಘಾತ ಸಂಭವಿಸಿದೆ. ರಿಸರ್ವ್ ಸಬ್ ಇನ್ಸ್ಪೆಕ್ಟರ್ ಸೇರಿ ಮೂವರು ಸ್ಥಳದಲ್ಲೇ ಸಾವನ್ನುಪ್ಪಿದ್ದಾರೆ. ಎಸ್ಐ ಈಶ್ವರ, ಆರ್‌ಎಸ್ಐ ಮಹಾಂತೇಶ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

