ರಾಮನಗರ: ಹಾಲಿನ ಟ್ಯಾಂಕರ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿದೆ. ಟ್ಯಾಂಕರ್ ಗೆ ಡಿಕ್ಕಿ ಆದ ರಭಸಕ್ಕೆ ಕಾರ್ ಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ.
ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರ ತಾಲೂಕಿನ ಗ್ರಾಮ ಸಂಗಬಸವನದೊಡ್ಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದಾಗ ಅಪಘಾತ ಉಂಟಾಗಿದೆ. ಅದೃಷ್ಟವಶಾತ್ ಕಾರ್ ನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ರಾಮನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
