ಬೆಂಗಳೂರು: ಆಕಸ್ಮಿಕ ಬೆಂಕಿಯಿಂದಾಗಿ ನಡುರಸ್ತೆಯಲ್ಲೇ ಕಾರ್ ಹೊತ್ತಿ ಉರಿದಿದ್ದು, ಅಗ್ನಿಶಾಮಕದ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಘಟನೆ ನಡೆದಿದೆ. ಆಕಸ್ಮಿಕ ಬೆಂಕಿಯಿಂದಾಗಿ ರಸ್ತೆಯಲ್ಲೇ ಕಾರ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಕಾರ್ ನಲ್ಲಿ ಇದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಹೈಗ್ರೌಂಡ್ಸ್ ಟ್ರಾಫಿಕ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.