ಮಂಡ್ಯ: ಬೆಂಗಳೂರು- ಮೈಸೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಚಲಿಸುತ್ತಿದ್ದ ಕಾರ್ ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಕಾರ್ ನಲ್ಲಿದ್ದ ದಂಪತಿ ಅಪಾಯದಿಂದ ಪಾರಾಗಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಸಮೀಪ ಘಟನೆ ನಡೆದಿದೆ.
ನಿಡಘಟ್ಟ ಗ್ರಾಮದ ಸಮೀಪ ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೈವೇನಲ್ಲಿ ಕಾರ್ ಹೊತ್ತಿ ಉರಿದಿದ್ದು, ಕಾರ್ ನಲ್ಲಿದ್ದ ಕಿರಣ್, ರಂಜಿತಾ ದಂಪತಿ ಅಪಾಯದಿಂದ ಪಾರಾಗಿದ್ದಾರೆ. ಅವರು ಬೆಂಗಳೂರಿನಿಂದ ಮಂಡ್ಯಕ್ಕೆ ಕಾರ್ ನಲ್ಲಿ ತೆರಳುತ್ತಿದ್ದರು.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಿ. ಹೊಸಹಳ್ಳಿಯ ಕಿರಣ್, ರಂಜಿತಾ ಹೈವೇಯಲ್ಲಿ ಚಲಿಸುತ್ತಿದ್ದ ವೇಳೆ ಹೊಗೆ ಕಾಣಿಸಿಕೊಂಡಿದೆ. ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ದಂಪತಿ ಕಾರ್ ನಿಂದ ಇಳಿದು ಪಾರಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಅಷ್ಟರಲ್ಲಿ ಕಾರ್ ಭಾಗಶಃ ಹೊತ್ತಿ ಉರಿದಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

