ಬಾಗಲಕೋಟೆ: ಕುಳಗೇರಿ ಕ್ರಾಸ್ ಸಮೀಪ ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಯೋಧ ಸಾವನ್ನಪ್ಪಿದ್ದಾರೆ. ಯೋಧ ಹನುಮಂತ ಹಟ್ಟಿ(26) ಮೃತಪಟ್ಟವರು ಎಂದು ಹೇಳಲಾಗಿದೆ.
ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಬಾದಾಮಿ ತಾಲೂಕಿನ ಸೋಮನಕೊಪ್ಪ ಗ್ರಾಮದ ನಿವಾಸಿಯಾಗಿರುವ ಹನಮಂತ ಹಟ್ಟಿ ಅವರು ರಜೆಯ ಮೇಲೆ ಊರಿಗೆ ಬಂದಿದ್ದರು.
ಅವರು 5 ವರ್ಷದ ಹಿಂದೆ ಸೇನೆಗೆ ಸೇರಿದ್ದರು. ಬೈಕ್ ನಲ್ಲಿ ತೆರಳುವಾಗ ಕಾರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
