ಚಿತ್ರದುರ್ಗ: ಚಿತ್ರಹಳ್ಳಿ ಗೇಟ್ ಬಳಿ ಬೈಕ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿತ್ರಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ.
ಹೊಳಲ್ಕೆರೆಯ ಯಶವಂತ್(30), ವಾಸುದೇವ್(43) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹೊಳಲ್ಕೆರೆಗೆ ತೆರಳುವಾಗ ರಾಷ್ಟ್ರೀಯ ಹೆದ್ದಾರಿ 369ರಲ್ಲಿ ಅಪಘಾತ ಸಂಭವಿಸಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

