HomeLatest NewsBREAKING: ಲಾರಿಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

BREAKING: ಲಾರಿಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಮತ್ತೊಂದು ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದು ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ತಾಲೂಕಿನ ತಮಟಕಲ್ಲು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ಹೊರಟಿದ್ದ ಇನ್ನೋವಾ ಕಾರ್ ಅಪಘಾತಕ್ಕೀಡಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಸಿಪಿಐ ಬಾಲಚಂದ್ರ ನಾಯ್ಕ್, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಿಂಡಿಸಕಟ್ಟೆ ಗ್ರಾಮದ ಬಳಿ ಬೀದರ್ -ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ಕಾರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ವಿಶ್ವನಾಥ(22), ನಂಜುಂಡಿ(23), ರಾಹುಲ್(23) ಯಶವಂತ(22) ಮೃತಪಟ್ಟವರು. ಮೃತರು ಹಿರಿಯೂರು ತಾಲೂಕಿನ ನಂಜಯ್ಯನಕೊಟ್ಟಿಗೆ ಗ್ರಾಮದವರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular