ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಹೊರವಲಯದಲ್ಲಿ ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೈಕ್ ಸವಾರರಾದ ನಾಗರಾಜ್(68), ವೆಂಕಟರೆಡ್ಡಿ(50) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೈಕ್ ಗೆ ಡಿಕ್ಕಿ ಹೊಡೆದು 200 ಮೀಟರ್ ದೂರದವರೆಗೂ ಕಾರ್ ಎಳೆದುಕೊಂಡು ಹೋಗಿದೆ. ಅಪಘಾತದ ನಂತರ ಕಾರ್ ನಿಲ್ಲಿಸಿ ಚಾಲಕ ಮತ್ತು ಇತರರು ಪರಾರಿಯಾಗಿದ್ದಾರೆ. ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

