ವಿಜಯಪುರ: ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತ ಸಂಭವಿಸಿದೆ.
ತಾಯಿ ಸತ್ಯವೇಣಿ(38), ಪುತ್ರರಾದ ಹರಿವೆಂಕಟರಾಮ(20), ಜಸ್ವಂತ್(18) ಸಾವನ್ನಪ್ಪಿದ್ದು, ರಾಘವೇಂದ್ರ(41) ಸ್ಥಿತಿ ಗಂಭೀರವಾಗಿದೆ. ಮನಗೂಳಿ ಸಮೀಪ ಕಾರ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

