ಚಿಕ್ಕಮಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ಅಪಘಾತ ಸಂಭವಿಸಿದೆ.
ರಸ್ತೆ ಬದಿಯಲ್ಲಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ತುಮಕೂರು ಜಿಲ್ಲೆ ಗುಬ್ಬಿ ಮೂಲದ ನಿವಾಸಿಗಳು ಎಂದು ಗೊತ್ತಾಗಿದೆ.
ತುಮಕೂರಿನಿಂದ ಕಾರ್ ನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಲಾರಿಗೆ ಕಾರ್ ಡಿಕ್ಕಿ ಹೊಡೆದು ಮೂವರು ಯುವಕರು ಸಾವನ್ನಪ್ಪಿದ್ದಾರೆ. ಧರ್ಮಸ್ಥಳಕ್ಕೆ ಹೋಗುತ್ತಿದ್ದಾಗಲೇ ಕೊಟ್ಟಿಗೆಹಾರ ಸಮೀಪ ಭೀಕರ ದುರಂತ ಸಂಭವಿಸಿದೆ. ಗುರುಕಿರಣ್, ಮೋಹನ್ ಮತ್ತು ಜ್ಞಾನೇಶ್ ಮೃತಪಟ್ಟವರು ಎಂದು ಹೇಳಲಾಗಿದೆ. ಪ್ರೇಮ್ ಕುಮಾರ್ ಮತ್ತು ಹೃತಿಕ್ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

