HomeLatest NewsBREAKING: ಮರಕ್ಕೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

BREAKING: ಮರಕ್ಕೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕಾರ್ ಮರಕ್ಕೆ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಸೋಮನಟ್ಟಿ ಗ್ರಾಮದ ಬಳಿ ನಡೆದಿದೆ.

ಸಚಿನ್ ಯಲ್ಲಪ್ಪ ಬೋರಿಮರದ, ಬಾಲಕೃಷ್ಣ ಬಸಪ್ಪ ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡ ಮತ್ತೊಬ್ಬ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮನಟ್ಟಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ನೇಸರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಹೋಲಿಸಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular