BREAKING : ಹಾಸನಾಂಬೆ ಭಕ್ತರ ಮೇಲೆ ಕಾರು ಹರಿದು ದುರಂತ ; ಸ್ಥಳದಲ್ಲೇ ಒದ್ದಾಡಿ ಪ್ರಾಣ ಬಿಟ್ಟ ತಂದೆ-ಮಗಳು.!

ಹಾಸನ : ಹಾಸನಾಂಬೆ ಭಕ್ತರ ಮೇಲೆ ಕಾರು ಹರಿದು ಅವಘಡ ಸಂಭವಿಸಿದ್ದು, ಸ್ಥಳದಲ್ಲೇ ತಂದೆ-ಮಗಳು ಸಾವನ್ನಪ್ಪಿದ್ದಾರೆ.

ಹಾಸನ ನಗರದ ತಣ್ಣೀರಹಳ್ಳ ಬಳಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ ಹಾಸನಾಂಬೆ ದೇವಿ ದರ್ಶನ ಪಡೆದು ದಂಪತಿ ಹಾಗೂ ಮಗಳು ಹಾಸನದಲ್ಲಿದ್ದ ಸಂಬಂಧಿಕರ ಮನೆಗೆ ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ವೇಗವಾಗಿ ಬಂದ ಸ್ವಿಫ್ಟ್ ಕಾರು ಡಿಕ್ಕಿ ಮೂವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತಂದೆ-ಮಗಳು ಸ್ಥಳದಲ್ಲೇ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ. ತಾಯಿ ಸ್ಥಿತಿ ಗಂಭೀರವಾಗಿದೆ. ಮೃತರನ್ನು ತಂದೆ ಕುಮಾರ (38) ಹಾಗೂ ಪುತ್ರಿ ಕಾವ್ಯ(12) ಎಂದು ಗುರುತಿಸಲಾಗಿದೆ. ಪತ್ನಿ ಪುಟ್ಟಮ್ಮಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮೃತರು ಆಲೂರು ತಾಲೂಕಿನ ಎನ್ ಹೆಚ್ ಪುರ ನಿವಾಸಿಗಳು ಎಂದು ತಿಳಿದು ಬಂದಿದೆ. ವಿಜಯನಗರದ ಸಂಬಂಧಿಗರ ಮನೆಗೆ ನಡೆದುಕೊಂಡು ತೆರಳುತ್ತಿದ್ದಾಗ ಈ ಅವಘಡ ನಡೆದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read