ಚಿಕ್ಕಮಗಳೂರು: ದಂಪತಿ ಮಕ್ಕಳು ತೆರಳುತ್ತಿದ್ದ ಬೈಕ್ ಗೆ ಕಾರ್ ಡಿಕ್ಕಿಯಾಗಿ ಓರ್ವ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಕಟ್ಟೆ ತಿಮ್ಮನಹಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆರು ವರ್ಷದ ಲಹರಿ ಸ್ಥಳದಲ್ಲಿ ಸಾವನ್ನಪ್ಪಿದ್ದಾಳೆ.
ಪುನೀತ್(37), ಪತ್ನಿ ಚೈತ್ರಾ(34), ಸಿರಿ(8) ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
