HomeLatest NewsBREAKING: ಬೈಕ್ ಗೆ ಕಾರ್ ಡಿಕ್ಕಿ: ಫ್ಲೈಓವರ್ ಮೇಲಿಂದ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

BREAKING: ಬೈಕ್ ಗೆ ಕಾರ್ ಡಿಕ್ಕಿ: ಫ್ಲೈಓವರ್ ಮೇಲಿಂದ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಬೆಂಗಳೂರು: ಬೈಕ್ ಗೆ ಕಾರ್ ಡಿಕ್ಕಿಯಾಗಿ ಫ್ಲೈ ಓವರ್ ಮೇಲಿಂದ ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ. ಒನ್ ವೇ ನಲ್ಲಿ ವೇಗವಾಗಿ ಬಂದ ಕಾರ್ ಚಾಲಕನಿಂದ ಅಪಘಾತ ಸಂಭವಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪದ ಬಚಳ್ಳಿ ಗೇಟ್ ಫ್ಲೈ ಓವರ್ ಮೇಲೆ ಘಟನೆ ನಡೆದಿದೆ.

ಬೆಂಗಳೂರಿನ ಬಾಣಸವಾಡಿ ಮೂಲದ ನೇತ್ರಾವತಿ(31) ಸಾವನ್ನಪ್ಪಿದ್ದಾರೆ. ಕಾರ್ ಡಿಕ್ಕಿಯಾಗಿ ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಕೆಳಗೆ ಬಿದ್ದಿದ್ದರಿಂದ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನ ಎಡಭಾಗಕ್ಕೆ ಬಿದ್ದಿದ್ದರಿಂದ ಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡಿರುವ ನೇತ್ರಾವತಿ ಪತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಕಡೆಗೆ ದಂಪತಿ ಬೈಕ್ ನಲ್ಲಿ ತೆರಳುತ್ತಿದ್ದರು. ಸೂಪರ್ವೈಸರ್ ಆಗಿದ್ದ ಪತಿ ಎರಡು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದರು. ನೇತ್ರಾವತಿ ಕೂಡ ಖಾಸಗಿ ಟೀ ಶಾಪ್ ನಲ್ಲಿ ಸೂಪರ್ವೈಸರ್ ಆಗಿದ್ದರು. ಅಪಘಾತ ಎಸಗಿ ಪರಾರಿಯಾದ ಕಾರ್ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular