ಬೆಂಗಳೂರು: ಬೆಂಗಳೂರು ಹೊರವಲಯದಲ್ಲಿ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸೈಫ್ ಪಾಷಾ, ಯೂಸುಫ್ ಖಾನ್, ಅಜರ್ ಪಾಷಾ ಮೃತಪಟ್ಟವರು ಎಂದು ಹೇಳಲಾಗಿದೆ. ಮೃತಪಟ್ಟ ಯುವಕರು ಬೆಂಗಳೂರಿನ ತಿಲಕ್ ನಗರ ನಿವಾಸಿಗಳಾಗಿದ್ದಾರೆ. ಬೆಂಗಳೂರು ಹೊರವಲಯದ ಅಗರ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.
ಬೆಂಗಳೂರಿನಿಂದ ಹಾರೋಹಳ್ಳಿ ಕಡೆಗೆ ತೆರಳುತ್ತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿದ್ದು, ಕಾರ್ ಡಿಕ್ಕಿಯ ರಭಸಕ್ಕೆ ಕಾರ್ ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತದೇಹಗಳನ್ನು ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಘಟನೆ ನಡೆದಿದೆ.

