ಕೋಲಾರ: ಮರಕ್ಕೆ ಕಾರ್ ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಭುವನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ.
ಕಾರ್ ನಲ್ಲಿದ್ದ ಬಾವನಹಳ್ಳಿ ಸಮೀಪ ಕೊರಚನೂರು ಗ್ರಾಮದ ಅರ್ಚನಾ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದ ವೇಳೆ ಕಾರ್ ನಲ್ಲಿದ್ದ ಮತ್ತೊಬ್ಬರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.