HomeLatest NewsBREAKING: ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಇಬ್ಬರು ಸಾವು, ಮೂವರಿಗೆ ಗಾಯ

BREAKING: ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಇಬ್ಬರು ಸಾವು, ಮೂವರಿಗೆ ಗಾಯ

ಬೆಂಗಳೂರು: ಬೆಂಗಳೂರು -ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ನೆಲಮಂಗಲ ತಾಲೂಕಿನ ಟಿ. ಬೇಗೂರು ಸಮೀಪ ಕಾರ್, ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ತೆರಳುತ್ತಿದ್ದ ಮಾರುತಿ ಎರ್ಟಿಗಾ ಕಾರ್ ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಹಿನ್ನೆಲೆಯಲ್ಲಿ ಹಿಂಬದಿಯಿಂದ ಲಾರಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಕಾರ್ ನಲ್ಲಿದ್ದ ಐದು ಜನರ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದಾರೆ.

ಶಿವಲಿಂಗಗೌಡ, ಪ್ರಮೀಳಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕುಟುಂಬದವರು ಕಾರ್ ನಲ್ಲಿ ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ಬರುವಾಗ ಅಪಘಾತ ಸಂಭವಿಸಿದೆ. ನೆಲಮಂಗಲ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular